PC Notes

KPSC EXAM

Friday, August 6, 2021

Karnataka SSLC Result 2021 - SSLC result tomorrow ..?!

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, August 6, 2021

 SSLC result tomorrow ..?!

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಕೃತ ವೆಬ್‍ಸೈಟ್ http://kseeb.kar.nic.in / karresult.nic.inಗೆ ಭೇಟಿ ನೀಡಿ ಅಲ್ಲಿ ಫಲಿತಾಂಶಗಳನ್ನು ಪರಿಶೀಲನೆ ಮಾಡಬಹುದು. ವೆಬ್‍ಸೈಟ್‍ನಲ್ಲಿ ತೆರೆದುಕೊಂಡ ಪುಟದಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ.

ಕೊರೊನಾ ಆತಂಕದ ನಡುವೆ ಹಲವು ಸಿದ್ಧತೆಗಳನ್ನು ಮಾಡಿಕೊಂಡು ನಿಯಮಗಳ ಪಾಲನೆಯೊಂದಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಗಡಿ ಪ್ರದೇಶದ ವಿದ್ಯಾರ್ಥಿಗಳಿಗೆಂದೇ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆಗೆ ಸೂಕ್ತ ಸಿದ್ಧತೆಗಳನ್ನು ಪರಿಶೀಲಿಸಲು ಅಣಕು ಪರೀಕ್ಷೆಗಳನ್ನು ನಡೆಸಲಾಗಿತ್ತು.

ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 152 ವಿದ್ಯಾರ್ಥಿಗಳು ಭಾಷಾ ವಿಷಯಗಳ ಪರೀಕ್ಷೆ ಬರೆದರು. 10,693 ವಲಸೆ ವಿದ್ಯಾರ್ಥಿಗಳು ತಮಗೆ ಸಮೀಪದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡಿದ್ದರು. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಕೇರಳ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಒಟ್ಟು 706 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.

ಈ ವರ್ಷಧಾರೆ ಸಾರಿಗೆ ಕಾರಣದಿಂದ ಯಾವುದೇ ಮಕ್ಕಳು ಗೈರು ಆಗದೆ ಶೇ.99.65ರಷ್ಟು ಹಾಜರಾತಿಯೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ


ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇಕಡಾವಾರು ಹಾಜರಾತಿಯೂ ಈ ಬಾರಿ ಹೆಚ್ಚಾಗಿದೆ ಎಂದು ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುರ್ಮಾ ಮಾಹಿತಿ ನೀಡಿದ್ದರು.

logoblog

Thanks for reading Karnataka SSLC Result 2021 - SSLC result tomorrow ..?!

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.