Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, December 2, 2022

7th Pay Commission Recruitment 2022 : 7ನೇ ರಾಜ್ಯ ವೇತನ ಆಯೋಗಕ್ಕೆ ಹುದ್ದೆಗಳನ್ನು ಸೃಜಿಸುವ ಬಗ್ಗೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, December 2, 2022

7th Pay Commission Recruitment 2022 : 7ನೇ ರಾಜ್ಯ ವೇತನ ಆಯೋಗಕ್ಕೆ ಹುದ್ದೆಗಳನ್ನು ಸೃಜಿಸುವ ಬಗ್ಗೆ.



(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)


ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು, ಈ ಮೇಲೆ ಓದಲಾದ ಕ್ರಮ ಸಂಖ್ಯೆ(1)ರ ದಿನಾಂಕ:19-11-2022ರ ಸರ್ಕಾರಿ ಆದೇಶದಲ್ಲಿ ಅಧ್ಯಕ್ಷರನ್ನೂ ಒಳಗೊಂಡಂತೆ ತ್ರಿಸದಸ್ಯ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿರುತ್ತದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಮುಂದುವರೆದು, ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ದಿನಾಂಕ: 28-11-2022ರ ಸರ್ಕಾರಿ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಷರತ್ತು ಮತ್ತು ನಿಬಂಧನೆಗಳನ್ನು ಹೊರಡಿಸಲಾಗಿರುತ್ತದೆ.


ದಿನಾಂಕ:19-11-2022ರ ಸರ್ಕಾರಿ ಆದೇಶದಲ್ಲಿ ರಚಿಸಲಾದ 7ನೇ ರಾಜ್ಯ ವೇತನ ಆಯೋಗದ


ಕಾರ್ಯನಿರ್ವಹಣೆಗೆ ಪೂರಕವಾಗಿ ಹೊಸ ಹುದ್ದೆಗಳನ್ನು ಸೃಜಿಸುವ ಪ್ರಸ್ತಾವನೆಯನ್ನು ಸರ್ಕಾರವು


ಪರಿಶೀಲಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶವನ್ನು ಹೊರಡಿಸಿದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಹುದ್ದೆಗಳು

ಕಾರ್ಯದರ್ಶಿ (ಐ.ಎ.ಎಸ್.ವೃಂದ) - 01


ಅಪರ / ಜಂಟಿ / ಉಪ ಕಾರ್ಯದರ್ಶಿ / ವಿಶೇಷಾಧಿಕಾರಿ - 03


ಜಂಟಿ / ಉಪ ಸಹ ಯುವ ನಿರ್ದೇಶಕರು (ಅಂಕಿಅಂಶ) - 01


ಅಧೀನ ಕಾರ್ಯದರ್ಶಿ / ಆಪ್ತ ಕಾರ್ಯದರ್ಶಿ - 06

ಶಾಖಾಧಿಕಾರಿ - 02

ಹಿರಿಯ ಸಹಾಯಕರು / ಸಹಾಯಕರು / ಶೀಘ್ರಲಿಪಿಗಾರರು / ಕಿರಿಯ ಸಹಾಯಕರು / ಬೆರಚ್ಚುಗಾರರು / ಡಾಟಾ ಎಂಟ್ರಿ ಅಪರೇಟರ್ ಹಾಗೂ ಇತರೆ ಗ್ರೂಪ್ ಸಿ ವೃಂದದ ಹುದ್ದೆಗಳು - 25


ದಲಾಯತ್ - 06


ಒಟ್ಟು - 44



2) ವೇತನ ಆಯೋಗವು ಶೀಘ್ರದಲ್ಲಿ ಕಾರ್ಯಾರಂಭ ಮಾಡುವುದಕ್ಕೆ ಅನುಕೂಲವಾಗುವಂತ ಮೇಲ್ಕಂಡ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ.


3) ಸುಲಭವಾಗಿ ಹೊಂದಿಕೊಳ್ಳುವ ಮತ್ತು ಕಾರ್ಯ ನಿರ್ವಹಣೆಯಲ್ಲಿ ಅಂತ‌ ವಿನಿಮಯತಯ ದೃಷ್ಟಿಯಿಂದ ಅಪರ ಉಪ ಕಾರ್ಯದರ್ಶಿ / ವಿಶೇಷಾಧಿಕಾರಿ ಹುದ್ದೆಗಳನ್ನು ಸೃಜಿಸಲಾಗಿರುತ್ತದೆ. ಗ್ರೂಪ್ ಸಿ ವೃಂದದ ಹುದ್ದೆಗಳನ್ನು ಒಟ್ಟಾರೆ ಸೃಜಿಸಲಾಗಿದ್ದು, ವೇತನ ಆಯೋಗವು ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಸ್ವಾತಂತ್ರವನ್ನು ಕಲ್ಪಿಸಲಾಗಿರುತ್ತದೆ.


4) ನೇ ರಾಜ್ಯ ವೇತನ ಆಯೋಗದ ವೆಚ್ಚವನ್ನು ಲೆಕ್ಕ ಶೀರ್ಷಿಕೆ : 12052-00-092-0-07 ಕರ್ನಾಟಕ ವೇತನ ಆಯೋಗ ರಡಿಯಲ್ಲಿ ಭರಿಸತಕ್ಕದ್ದು.


5) ಲೆಕ್ಕ ಶೀರ್ಷಿಕೆ "2052-00-092-0-07 ಕರ್ನಾಟಕ ವೇತನ ಆಯೋಗ ಇದಕ್ಕೆ ಸಂಬಂಧಿಸಿದಂತೆ, ಉಪ ಕಾರ್ಯದರ್ಶಿ, 7ನೇ ರಾಜ್ಯ ವೇತನ ಆಯೋಗ, ಇವರು ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಯನ್ನಾಗಿ (DDO) ಪ್ರಾಧೀಕರಿಸಲಾಗಿದೆ.


6) 7ನೇ ರಾಜ್ಯ ವೇತನ ಆಯೋಗಕ್ಕೆ ಸೃಜಿಸಲಾದ ಈ ಮೇಲಿನ ಹುದ್ದೆಗಳನ್ನು ಆಯೋಗದ ಅವಧಿಯವರೆಗೆ ತಾತ್ಕಾಲಿಕವಾಗಿ ಸೃಜನ ಮಾಡಲಾಗಿರುತ್ತದೆ. ಸೃಜಿಸಲಾದ ಹುದ್ದೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಕರ್ನಾಟಕ ಸರ್ಕಾರದ ಸಚಿವಾಲಯದ ಸೇವೆಯಿಂದ ಅಥವಾ ಸರ್ಕಾರದ ಇನ್ನಿತರ ಇಲಾಖೆಗಳಿಂದ ನಿಯೋಜನೆ ಮೇಲೆ ಭರ್ತಿ ಮಾಡತಕ್ಕದ್ದು.

7) ಈ ಆದೇಶವನ್ನು ಟಿಪ್ಪಣಿ ಸಂಖ್ಯೆ: DPAR 452 PSS 2022 ದಿನಾಂಕ 24-11-2022ರಲ್ಲಿ ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆಯು ನೀಡಿದ ಸಹಮತಿಯಂತೆ ಹೊರಡಿಸಲಾಗಿದೆ.

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading 7th Pay Commission Recruitment 2022 : 7ನೇ ರಾಜ್ಯ ವೇತನ ಆಯೋಗಕ್ಕೆ ಹುದ್ದೆಗಳನ್ನು ಸೃಜಿಸುವ ಬಗ್ಗೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts