Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, April 7, 2023

CRPF Recruitment 2023 : ಸಿಆರ್ ಪಿಎಫ್‌ನಲ್ಲಿ 1.3 ಲಕ್ಷಕ್ಕೂ ಅಧಿಕ ಹುದ್ದೆ ಭರ್ತಿಗೆ ಅಧಿಸೂಚನೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, April 7, 2023

ಶೀರ್ಷಿಕೆ: ಸಿಆರ್ ಪಿಎಫ್‌ನಲ್ಲಿ 1.3 ಲಕ್ಷಕ್ಕೂ ಅಧಿಕ ಹುದ್ದೆ ಭರ್ತಿಗೆ ಅಧಿಸೂಚನೆ.



ಭಾರತ ಸರ್ಕಾರದ ಗೃಹ ಸಚಿವಾಲಯದಡಿ ಕಾರ್ಯನಿರ್ವಹಿಸುವ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿ (ಸಿಆರ್‌ಪಿಎಫ್) ಇದೇ ಮೊದಲ ಬಾರಿಗೆ 1.3 ಲಕ್ಷಕ್ಕೂ ಅಧಿಕ ಕಾನ್‌ಸ್ಟೆಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಕೇಂದ್ರದಲ್ಲಿ ಉದ್ಯೋಗ ಹುಡುಕುತ್ತಿರುವ, ಪೊಲೀಸ್ ಆಗಬೇಕೆಂದು ಕನಸು ಕಾಣುತ್ತಿರುವ ಅನೇಕ ಮಂದಿಗೆ ಈ ಅವಕಾಶ ವರದಾನವಾಗಲಿದೆ. ಪುರುಷರಿಗೆ 1,25,262 ಸ್ಥಾನ ಮೀಸಲಿಟ್ಟಿದ್ದರೆ, ಮಹಿಳೆಯರಿಗೆ 4,667 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ. ಹುದ್ದೆಗೆ ಮೀಸಲಾತಿ ಅನ್ವಯವಾಗಿರುವುದು ವಿಶೇಷ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿ ಅರ್ಹತಾ ಅಭ್ಯರ್ಥಿ ಭಾರತ ಸರ್ಕಾರದಿಂದ


ಮಾನದಂಡ


ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ ಯಾವುದೇ ಪದವಿ ಪಡೆದಿರಬೇಕು. ಎಲ್ಲ ಮೀಸಲಾತಿ ಅಭ್ಯರ್ಥಿಗಳಿಗೂ ಒಂದೇ ಪದವಿ ಅನ್ವಯವಾಗಲಿದ್ದು, ಅಂಕಗಳಲ್ಲಿ ಸಡಿಲಿಕೆ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019



ವಯೋಮಿತಿ


ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ ವಯೋಮಿತಿ 23 ವರ್ಷ ಇರಬೇಕು. ಎಸ್ಸಿ, ಎಸ್ಟಿ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 3ರಿಂದ 5 ವರ್ಷ ವಯೋಸಡಿಲಿಕೆ ನೀಡಲಾಗಿದೆ.

ಒಟ್ಟು ಹುದ್ದೆಗಳು : 1,29,929



ಪ್ರಮುಖ ಸೂಚನೆಗಳು


ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಇದರಲ್ಲಿ ಅರ್ಹರಾದವರನ್ನು ಸಂದರ್ಶನಕ್ಕೆ ಆಹ್ವಾನಿಸಿ ಅಲ್ಲಿ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆಗಳಿಗೆ ನೇಮಕ ಮಾಡಲಾಗುವುದು. ಪರೀಕ್ಷೆಯು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಇರಲಿದೆ. ಇದರಲ್ಲಿ ಅರ್ಹರಾದವರನ್ನು ದೈಹಿಕ ಪರೀಕ್ಷೆಗೆ ಒಳಪಡಿಸಿ ದಾಖಲೆ ಪರಿಶೀಲನೆ ನಡೆಸಲಾಗುವುದು. ಸಲ್ಲಿಸಿದ ದಾಖಲೆ ಸುಳ್ಳು ಎಂದು ಕಂಡುಬಂದಲ್ಲಿ ತಕ್ಷಣವೇ ಅಭ್ಯರ್ಥಿಯನ್ನು ಕೆಲಸದಿಂದ ವಜಾಗೊಳಿಸಲಾಗುವುದು. ಪರೀಕ್ಷೆಯ ಪ್ರವೇಶ ಪತ್ರವನ್ನು ಅನ್‌ಲೈನ್‌ ಮೂಲಕವೇ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಯ ಸಮಯದಲ್ಲಿ ತರತಕ್ಕದ್ದು. ಪ್ರತಿ ಹಂತದ ಪರೀಕ್ಷೆಗೂ ಪ್ರವೇಶ ಪತ್ರ ಇರಲಿದೆ.ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸಂಬಳ ಎಷ್ಟು?


ಕೇಂದ್ರ ಸರ್ಕಾರದ ನಿಯಮದನ್ವಯ ಮಾಸಿಕ ವೇತನ 21,700 ರೂ. To 69,100 ರೂ. ನಿಗದಿಪಡಿಸಲಾಗಿದೆ. ಇದರೊಂದಿಗೆ ಸರ್ಕಾರದಿಂದ ನೀಡುವ ಇತರ ಎಲ್ಲ ಭತ್ಯೆಗಳೂ ಇರಲಿವೆ.

ಅರ್ಜಿ ಸಲ್ಲಿಸುವ ವಿಧಾನ


ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ನಿಗದಿತ ವೆಬ್ ಸೈಟ್‌ನಲ್ಲಿರುವ ಅರ್ಜಿಯಂತ ಟೈಪ್ ಮಾಡಿಕೊಂಡು ಫೋಟೋ, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಅನ್‌ಲೈನ್ ಮೂಲಕ ಮಾತ್ರ ಸಲ್ಲಿಸತಕ್ಕದ್ದು. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೆಚ್ಚ: ಉಚಿತವಾಗಿ

ಪರೀಕ್ಷಾ ಕ್ರಮ | ಶಾರ್ಟ್‌ ಲಿಸ್ಟ್ ಅದ ಅಭ್ಯರ್ಥಿ


ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದರೆ ಮಾತ್ರ ಮುಂದಿನ ಹಂತಕ್ಕೆ ಆಯ್ಕೆ ಆಗುತ್ತಾರೆ. ನಂತರ ಅವರನ್ನು ಸಂದರ್ಶನಕ್ಕೆ ಆಹ್ವಾನಿಸಿ ಅಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಕೊನೆಯಲ್ಲಿ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಇರಲಿದೆ. ಪರೀಕ್ಷೆಯ ಮಾಕ್‌ಟೆಸ್ಟ್ ಮಾದರಿ ಅಧಿಕೃತ ವೆಬ್‌ಸೈಟ್‌ನಲ್ಲಿ ಶೀಘ್ರದಲ್ಲಿ ಪ್ರಕಟವಾಗಲಿದೆ. ದೈಹಿಕ ಮಾನದಂಡ: ಪುರುಷ ಅಭ್ಯರ್ಥಿಗಳಿಗೆ 165ರಿಂದ 170 ಸೆ.ಮೀ. ಮಹಿಳೆಯರಿಗೆ-155ರಿಂದ 157 ಸೆ.ಮೀ. ಇರಬೇಕು. ಎದೆ ಸುತ್ತಳತೆ (ಮಹಿಳಾ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲ) 77-82 ಸೆಂ.ಮೀ., ಅಭ್ಯರ್ಥಿಗಳ ಎತ್ತರ ಹಾಗೂ ವಯಸ್ಸಿನ ಆಧಾರದ ಮೇಲೆ ದೈಹಿಕ ತೂಕವನ್ನು ಪರಿಗಣಿಸಲಾಗುವುದು. ದೃಷ್ಟಿ ಸಮಸ್ಯೆ ಹಾಗೂ ದೇಹದ ಯಾವುದೇ ಭಾಗದಲ್ಲಿ ಟ್ಯಾಟು ಇರಬಾರದು.


Website : https://crpf.gov.in/


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading CRPF Recruitment 2023 : ಸಿಆರ್ ಪಿಎಫ್‌ನಲ್ಲಿ 1.3 ಲಕ್ಷಕ್ಕೂ ಅಧಿಕ ಹುದ್ದೆ ಭರ್ತಿಗೆ ಅಧಿಸೂಚನೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts