Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, March 3, 2024

KAS ನೇಮಕಾತಿ 2024 | ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, March 3, 2024

KAS ನೇಮಕಾತಿ 2024 | ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ 2024


ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿದ 384 ಹುದ್ದೆಗಳು ಹಾಗೂ * ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಪ್ರಕ್ರಿಯೆ ನಡೆಯಲಿರುವ 1.000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಮಾರ್ಚ್ 4 ಅಂದರೆ ಇಂದಿನಿಂದ • ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ವರ್ಷದ ಮೊದಲ ಬೃಹತ್ ನೇಮಕಾತಿ ಪ್ರಕ್ರಿಯೆ ಇದಾಗಿದ್ದು, ರಾಜ್ಯದ ಉದ್ಯೋಗಾಕಾಂಕ್ಷಿಗಳು ತಡಮಾಡದೆ ಅಧಿಸೂಚನೆಯಲ್ಲಿ ನೀಡಿರುವ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿ # ಸಲ್ಲಿಸಬೇಕು. ಈ ಎರಡೂ ಹುದ್ದೆಗಳಿಗೂ ಮಾರ್ಚ್ 4ರಿಂದ ಏಪ್ರಿಲ್ 3ರ ತನಕ ಅರ್ಜಿ : ಸಲ್ಲಿಸಬಹುದು.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

KAS ನೇಮಕಾತಿ 2024 ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ: ಗೆಜೆಟೆಡ್ ಪ್ರೊಬೆಷನರಿಗಳ ಹುದ್ದೆಗಳ ಪೈಕಿ

ಗ್ರೂಪ್ ಎ ವೃಂದದ 159 ಹಾಗೂ ಗ್ರೂಪ್ ಬಿ ವೃಂದದ 225 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ನಿಯಮದಂತೆ ಹೈದರಾಬಾದ್ ಕರ್ನಾಟಕಕ್ಕೆ 77 ಹುದ್ದೆಗಳನ್ನು ಮತ್ತು ಆರ್ಪಿಸಿ (ಕರ್ನಾಟಕದ ಇತರೆ ಪ್ರದೇಶ) ವೃಂದಕ್ಕೆ 307 ಹುದ್ದೆಗಳನ್ನು ನಿಗದಿಪಡಿಸಲಾಗಿದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

KAS ನೇಮಕಾತಿ 2024ಅರ್ಹತೆ ಹೀಗಿರಲಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಇದಕ್ಕೆ ತತ್ಸಮಾನ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸುವ ಅವಕಾಶವಿರುತ್ತದೆ. ಹಲವು ವರ್ಷಗಳಿಂದ ಕೆಎಎಸ್ ನೇಮಕ ನಡೆಯದ ಕಾರಣ ಸರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಮೂರು ವರ್ಷದ ವಯೋಮಿತಿ ಸಡಿಲಿಸಲಿದೆ. ಸಾಮಾನ್ಯ ವರ್ಗದ 21ರಿಂದ 38 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 41 ವರ್ಷಗಳನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮಾಜಿ ಸೈನಿಕರಾಗಿದ್ದಲ್ಲಿ ಸೇವೆ ತಿ ಸಲ್ಲಿಸಿರುವಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು ಅವರ ಗರಿಷ್ಠ ವಯೋಮಿತಿ ಆಗಿರುತ್ತದೆ. ವಿಶೇಷಚೇತನ ಅಭ್ಯರ್ಥಿಗಳು, ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಕೆಲವೊಂದು ಹುದ್ದೆಗಳಿಗೆ ದೈಹಿಕ ದಾರ್ಡ್ಯತೆ ಕೂಡ ಅಗತ್ಯವಾಗಿರುತ್ತದೆ. ಅಂಥ ದೈಹಿಕ ದಾರ್ಡ್ಯತೆಯನ್ನು ಹೊಂದಿದ್ದಲ್ಲಿ ಮಾತ್ರ

ಆಭ್ಯರ್ಥಿಗಳನ್ನು ನೇಮಕಕ್ಕೆ ಪರಿಗಣಿಸಲಾಗುತ್ತದೆ.


KAS ನೇಮಕಾತಿ 2024 ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600 ರೂ., ಪ್ರವರ್ಗ 2ಎ, 2ಬಿ, 3ಎಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 300 ರೂ. ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



KAS ನೇಮಕಾತಿ 2024 : ಅರ್ಜಿ ಸಲ್ಲಿಸುವಾಗ ಗಮನಿಸಿ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವಿಳಾಸ, ಪ್ರ-ವರ್ಗ, ತಂದೆ, ತಾಯಿ ಹೆಸರು, ವಿದ್ಯಾರ್ಹತೆ ಮತ್ತಿತರ ವಿಷಯಗಳನ್ನು ತಪ್ಪಾಗಿ ನಮೂದಿಸಿರುವುದಾಗಿ ತಿಳಿಸಿ, ಆ ಮಾಹಿತಿಗಳನ್ನು ಬದಲಾವಣೆ ಮಾಡುವಂತೆ ಮನವಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ಒಂದು ಬಾರಿ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿದ ನಂತರ ಆ ಅರ್ಜಿಯಲ್ಲಿನ ಮಾಹಿತಿಗಳನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಹಾಗಾಗಿ, ಅಭ್ಯರ್ಥಿಗಳೇ ನಿಗದಿಪಡಿಸಿದ ದಿನಾಂಕದೊಳಗೆ ಮಾಹಿತಿ ಸರಿಪಡಿಸಿ ನೇರವಾಗಿ https://kpsc.kar.nic.in ಭೇಟಿ ನೀಡಬಹುದು.


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KAS ನೇಮಕಾತಿ 2024 | ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts