Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Wednesday, April 3, 2024

ONE NATION ONE ELECTION | ಭಾರತದಲ್ಲಿ ಏಕಕಾಲಿನ ಚುನಾವಣೆಗಳನ್ನು ನಡೆಸಲು ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, April 3, 2024

ಶೀರ್ಷಿಕೆ: ONE NATION ONE ELECTION | ಭಾರತದಲ್ಲಿ ಏಕಕಾಲಿನ ಚುನಾವಣೆಗಳನ್ನು ನಡೆಸಲು ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸು



ಭಾರತದಲ್ಲಿ ಏಕಕಾಲಿನ ಚುನಾವಣೆಗಳನ್ನು ನಡೆಸಲು ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸು

ಭಾರತದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಂಸದೀಯ ಚುನಾವಣೆಗಳು, ರಾಜ್ಯ ವಿಧಾನಸಭೆಗಳ ಚುನಾವಣೆಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ನಿಟ್ಟಿನಲ್ಲಿ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲಾಗಿತ್ತು.

ONE NATION ONE ELECTION

* 22 ಸದಸ್ಯರನ್ನು ಒಳಗೊಂಡಿದ್ದ ಈ ಸಮಿತಿಯು ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ವರದಿಯನ್ನು ಸಲ್ಲಿಸಿದ್ದು, ಆಡಳಿತವನ್ನು ಸುಧಾರಿಸುವ ಉದ್ದೇಶದಿಂದ ಹಾಗೂ ಚುನಾವಣಾ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಮಾರ್ಗಸೂಚಿಯನ್ನು ಸಲ್ಲಿಸಿದೆ.

* ಸಮಿತಿಯ ಶಿಫಾರಸ್ಸಿನ ಅನ್ವಯ ಮೊದಲನೇ ಹಂತದಲ್ಲಿ ಲೋಕಸಭೆ ಮತ್ತು ರಾಜ್ಯದ ವಿಧಾನಸಭೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ಆಯೋಜಿಸುವುದು.

2024 ರ ಲೋಕಸಭೆಯ ಚುನಾವಣೆಯ ನಂತರ ಆಯೋಜನೆಯಾಗುವ ರಾಜ್ಯಗಳ ವಿಧಾನಸಭೆಗಳ ಚುನಾವಣೆಯನ್ನು ಲೋಕಸಭೆಯ ಅವಧಿಗೆ ಪೂರ್ಣಗೊಳ್ಳುವಂತೆ ನಡೆಸುವುದು. ಅಂದರೆ 2024 ರ ಲೋಕಸಭಾ ಚುನಾವಣೆಯ ನಂತರ ಆಯೋಜನೆ ಆಗುವ ರಾಜ್ಯದ ವಿಧಾನಸಭೆಗಳ ಅವಧಿ ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಕಾರ್ಯನಿರ್ವಹಿಸುವಂತೆ ತಿದ್ದುಪಡಿಯನ್ನು ತರುವುದು. ನಂತರ 2029 ರ ಲೋಕಸಭೆ ಮತ್ತು ವಿಧಾನಸಭೆಯ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಬಹುದು ಎನ್ನುವ ಶಿಫಾರಸ್ಸನ್ನು ನೀಡಿದೆ. ಆದರೆ ಕಳೆದ ಎರಡು ವರ್ಷಗಳಲ್ಲಿ ಅಧಿಕಾರಕ್ಕೆ ಬಂದಿರುವ ರಾಜ್ಯ ವಿಧಾನಸಭೆಗಳ ಅವಧಿಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

ಎರಡನೇ ಹಂತದಲ್ಲಿ ಲೋಕಸಭೆ, ವಿಧಾನಸಭೆ ಮತ್ತು ಸ್ಥಳೀಯ ಸರ್ಕಾರಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದು. ಸ್ಥಳೀಯ ಸರ್ಕಾರಗಳ ಚುನಾವಣೆಗಳನ್ನು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯ ನಂತರ 100 ದಿನದ ಒಳಗಾಗಿ ಆಯೋಜಿಸುವಂತೆ ವರದಿಯಲ್ಲಿ ಸೂಚಿಸಲಾಗಿದೆ.

* ವರದಿಯಲ್ಲಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಲು ಸಂವಿಧಾನಕ್ಕೆ 324 ಎ ಅನುಚ್ಛೇದವನ್ನು ಸೇರಿಸಲು ಉಲ್ಲೇಖಿಸಿದ್ದು, ಸಂವಿಧಾನಾತ್ಮಕ ತಿದ್ದುಪಡಿಯ ನಂತರ ಸಂಸತ್ತು ತಿದ್ದುಪಡಿಗೆ ಅನುಗುಣವಾಗಿ ಶಾಸನವನ್ನು ಜಾರಿಗೆ

ತರುವಂತೆ ಉಲ್ಲೇಖಿಸಿದೆ.

ಸಂವಿಧಾನದ ಅನುಚ್ಚೇದ 325 ರ ಅಡಿಯಲ್ಲಿ ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗಗಳೊಂದಿಗೆ ಸಮಾಲೋಚಿಸುವ ಮೂಲಕ ಸಾಮಾನ್ಯ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ವರದಿಯಲ್ಲಿ ಉಲ್ಲೇಖಿಸಿದೆ.

* ಯಾವುದಾದರೂ ವಿಧಾನಸಭೆಗಳು ಸಂಪೂರ್ಣ ಬಹುಮತವನ್ನು ಹೊಂದದೆ ಸರ್ಕಾರವನ್ನು ರಚಿಸಲು ಸಾಧ್ಯವಾಗದೆ ಇದ್ದರೆ ಮರು ಚುನಾವಣೆಯನ್ನು ಉಳಿದ ಅವಧಿಗೆ ನಡೆಸುವಂತೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

* ಪ್ರಾಯೋಗಿಕವಾಗಿ ಹಲವಾರು ಸವಾಲುಗಳನ್ನು ಹೊಂದಿರುವ ಮಾರ್ಗಸೂಚಿಯಾಗಿದ್ದು, ರಾಜ್ಯಗಳೊಂದಿಗೆ ಸಮಾಲೋಚಿಸುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಯಾವುದೇ ಧಕ್ಕೆ ಆಗದ ರೀತಿಯಲ್ಲಿ ಈ ಬದಲಾವಣೆಗಳನ್ನು ಜಾರಿಗೆ ತರಬೇಕಾಗಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ONE NATION ONE ELECTION | ಭಾರತದಲ್ಲಿ ಏಕಕಾಲಿನ ಚುನಾವಣೆಗಳನ್ನು ನಡೆಸಲು ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸು

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts